KARNATAKA
ಬೆಂಗಳೂರು – ಜೆಸಿಬಿ ಹರಿದು 2 ವರ್ಷ ಪ್ರಾಯದ ಪುಟ್ಟ ಮಗು ಸಾವು

ಬೆಂಗಳೂರು, ಫೆಬ್ರವರಿ 19: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಪುಟ್ಟ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸಾವನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
