LATEST NEWS
ಕರಾವಳಿಯ ಬಿಜೆಪಿ ಅತೃಪ್ತರನ್ನು ಸೆಳೆಯಲು ಮುಂದಾದ ಜೆಡಿಎಸ್

ಕರಾವಳಿಯ ಬಿಜೆಪಿ ಅತೃಪ್ತರನ್ನು ಸೆಳೆಯಲು ಮುಂದಾದ ಜೆಡಿಎಸ್
ಮಂಗಳೂರು ಎಪ್ರಿಲ್ 17 : ಕರಾವಳಿಯಲ್ಲಿ ಬಂಡಾಯವೆದ್ದಿರುವ ಬಿಜೆಪಿ ಮುಖಂಡರಿಗೆ ಜೆಡಿಎಸ್ ಗಾಳ ಹಾಕಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಿಸುವ ಪರಿಸ್ಥಿತಿ ನಿರ್ಮಾಣ ವಾಗಿರುವ ಹಿನ್ನಲೆಯಲ್ಲಿ ಜೆಡಿಎಸ್ ಅತೃಪ್ತರನ್ನು ತನ್ನತ್ತ ಸಳೆಯಲು ತಂತ್ರ ರೂಪಿಸಿದೆ.

ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಕುಮಾರ್ ರೈ ಅವರಿಗೆ ನೇರ ದೂರವಾಣಿ ಕರೆ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ ಎಚ್ ಡಿ ಕುಮಾರಸ್ವಾಮಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿದೆ.
ಅಶೋಕ್ ಕುಮಾರ್ ರೈ ಕುಮಾರ ಸ್ವಾಮಿ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ್ದಾರೆ.
ಪುತ್ತೂರು ಕ್ಷೇತ್ರದಿಂದ ಸ್ಪರ್ಧೆ ನಡೆಸೋದಾದರೆ ಟಿಕೆಟ್ ನೀಡೋದಾಗಿ ಎಚ್ ಡಿ ಕುಮಾರ ಸ್ವಾಮಿ, ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ ಮಾಡೋದಾಗಿ ಅಶೋಕ್ ಕುಮಾರ್ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಪುತ್ತೂರು ಬಿಜೆಪಿ ಅಭ್ಯರ್ಥಿ ಯಾಗಿ ಸಂಜೀವ ಮಠಂದೂರು ಕಣಕ್ಕೆ ಹಿನ್ನಲೆ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ಅರುಣ್ ಕುಮಾರ್ ಪುತ್ತಿಲ ಪರ ಬಿಜೆಪಿ ಕಾರ್ಯಕರ್ತರು ಪ್ರಚಾರ ದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.