LATEST NEWS
ಜೈಲಿನಿಂದಲೇ ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ
ಮಂಗಳೂರು ಎಪ್ರಿಲ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ಶಾಫಿ ಬೆಳ್ಳಾರೆ ಪುತ್ತೂರು ವಿಧಾನಸಭೆ ಕ್ಷೇತ್ರಕ್ಕೆ ಎಸ್ ಡಿಪಿಐನಿಂದ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರದಂದು ಶಾಫಿ ಬೆಳ್ಳಾರೆ ಅನುಪಸ್ಥಿತಿಯಲ್ಲಿ ಪಕ್ಷದ ಮುಖಂಡರು ಬುಧವಾರ ಪುತ್ತೂರಿನ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಸಾಗಿ ತಾಲೂಕು ಅಡಳಿತ ಸೌಧಕ್ಕೆ ತೆರಳಿದರು. ಬೆಳ್ಳಾರೆ ಪರವಾಗಿ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹೀಮಾನ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಫಿ ಬೆಳ್ಳಾರೆ ಈಗಾಗಲೇ ಜೈಲಿನಲ್ಲಿದ್ದಾರೆ. ಅವರು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡ ವ್ಯಕ್ತಿಯಾಗಿದ್ದು ರಾಜಕೀಯ ಷ ಜೈಲಿನಲ್ಲಿರಿಸಲಾಗಿದೆ.
ಇಸ್ಮಾಯಿಲ್ ಶಾಫಿ ಕೆ. ತಮ್ಮ ಸೂಚಕರ ಮುಖಾಂತರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಇದೇ ವೇಳೆ ಪಿ. ಇಬ್ರಾಹಿಂ ಅವರು ಎಸ್‌ಡಿಪಿಐ ಅಭ್ಯರ್ಥಿಯಾಗಿ ಇನ್ನೊಂದು ನಾಮಪತ್ರ ಸಲ್ಲಿಸಿದ್ದಾರೆ. 2022ರ ಜು.26ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶಾಫಿ ಬೆಳ್ಳಾರೆಯನ್ನು ಎನ್‌ಐಎ ಬಂಧಿಸಿತ್ತು.