DAKSHINA KANNADA
ಜೆರೋಸಾ ಶಾಲಾ ಪ್ರಕರಣ, ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಿಕ್ಷಕಿಗೆ ವಿದೇಶದಿಂದ ಜೀವ ಬೆದರಿಕೆ..!
ಮಂಗಳುರು : ವಿವಾದಗ್ರಸ್ಥ ಜೆರೋಸಾ ಶಾಲಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ಶಾಲಾ ಆಡಳಿತ ಮಂಡಳಿ ವಜಾಗೊಳಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಗರೋಡಿ ನಿವಾಸಿ ಕವಿತಾ ಅವರ ಕುಟುಂಬದ ಫೋಟೋದೊಂದಿಗೆ, ಫೋನ್ ನಂಬರ್ ಕೂಡಾ ವೈರಲ್ ಮಾಡಲಾಗಿದೆ. ಪರಿಣಾಮ ಅವರಿಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದೆ ಎಂದು ದೂರಲಾಗಿದೆ. ಮಾಧ್ಯಮಗಳಿಗೆ ಕವಿತಾ ಹೇಳಿಕೆ ನೀಡಿದ್ದಾರೆ ಹಾಗೂ ಆಡಿಯೋ ವೈರಲ್ ಮಾಡಿದ್ದಾರೆಂದು ವಿದೇಶದಿಂದ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ ಕವಿತಾ ಅವರ ಪುತ್ರಿ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚೆಗೆ ಸಿಸ್ಟರ್ ಪ್ರಭಾ ವಿರುದ್ಧ ಪೋಷಕರ ಪ್ರತಿಭಟನೆಯಲ್ಲೂ ಭಾಗವಹಿಸಿದ್ದಳು. ಈ ನಡುವೆ, ಜೆರೋಸಾ ಶಿಕ್ಷಕಿಯ ವಿರುದ್ಧ ಆಡಿಯೋ ವೈರಲ್ ಮಾಡಿರುವುದು ಕವಿತಾ ಎಂದು ಆರೋಪಿಸಿ ಬೆದರಿಕೆ ಬರಲಾರಂಭಿಸಿದೆ. ಕತಾರ್, ದುಬೈ, ಸೌದಿ ಸೇರಿ ಹಲವೆಡೆಯಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಅವಾಚ್ಯವಾಗಿ ನಿಂದಿಸಿ ವಾಟ್ಸ್ಆ್ಯಪ್ಗೆ ಅಶ್ಲೀಲವಾದ ಆಡಿಯೋ ಸಂದೇಶ ಕಳುಹಿಸಲಾಗುತ್ತಿದೆ. ಅಲ್ಲದೆ ಕವಿತಾ ಅವರು ಶಿಕ್ಷಕಿ ವಿರುದ್ಧ ಮಾಧ್ಯಮದಲ್ಲಿ ಮಾತನಾಡಿರುವ ಹಿನ್ನಲೆಯಲ್ಲಿ ಅವರು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಹೋಲಿ ಏಂಜಲ್ ಶಿಕ್ಷಣ ಸಂಸ್ಥೆ ಅವರನ್ನು ಹುದ್ದೆಯಿಂದಲೇ ವಜಾಗೊಳಿಸಿದೆ.