National
ಕೆನರಾ ಬ್ಯಾಂಕ್ ಗೆ 538 ಕೋಟಿ ವಂಚನೆ – ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್
ಮುಂಬೈ ಸೆಪ್ಟೆಂಬರ್ 02: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ. ಕೆನರಾ ಬ್ಯಾಂಕ್ನ ₹ 538 ಕೋಟಿ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಬಂಧನವಾಗಿದೆ.
ಜೆಟ್ ಏರ್ ವೇಸ್ ಸಂಸ್ಥಾಪರ ಗೋಯಲ್ ಅವರ ಪತ್ನಿ ಅನಿತಾ, ಹಾಗೂ ಕಂಪನಿ ಕೆಲ ಮಾಜಿ ಸಿಬ್ಬಂದಿಯ ವಿರುದ್ಧ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ಮೊಕದ್ದಮೆಯನ್ನು ದಾಖಲಿಸಿತ್ತು. ಬ್ಯಾಂಕ್ ಈ ಸಂಬಂಧ ದೂರು ದಾಖಲಿಸಿತ್ತು.ಜೆಟ್ ಏರ್ವೇಸ್ (ಇಂಡಿಯಾ) ಲಿಮಿಟೆಡ್ ಸಂಸ್ಥೆಯು ಬ್ಯಾಂಕ್ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.
ಇದೀಗ ಪಿಎಂಎಲ್ಎ ಕಾಯ್ದೆಯಡಿ ಅವರನ್ನು ವಶಕ್ಕೆ ಪಡೆದು ಸುದೀರ್ಘ ಅವಧಿಗೆ ವಿಚಾರಣೆಗೆ ಒಳಪಡಿಸಲಾಗಿತ್ತು. 74 ವರ್ಷದ ಗೋಯಲ್ ಅವರನ್ನು ಇಲ್ಲಿನ ಪಿಎಂಎಲ್ಎ ವಿಶೇಷ ಕೋರ್ಟ್ನಲ್ಲಿ ಶನಿವಾರ ಹಾಜರುಪಡಿಸಿ ವಶಕ್ಕೆ ಒಪ್ಪಿಸಲು ಕೋರಲಾಗುವುದು ಎಂದು ತಿಳಿಸಿವೆ.
You must be logged in to post a comment Login