Connect with us

    LATEST NEWS

    ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಹಾಗೂ 4 ಲಕ್ಷ ರೂ. ಕಳವು

    ಕಾಸರಗೋಡು, ಜೂನ್ 24 : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ.

    ಪೂಚಕ್ಕಾಡ್ ಮುನೀರ್ ಎಂಬವರ ಮನೆಯ ಮೇಲಂತಸ್ತಿನ ಕಿಟಿಕಿ ಸರಳು ಮುರಿದು ಕಳ್ಳರು ಒಳನುಗ್ಗಿದ್ದು, ಕಪಾಟಿನಲ್ಲಿ ಇರಿಸಲಾಗಿದ್ದ ಚಿನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ಮುನೀರ್ ಹಾಗೂ ಮನೆಯವರು ಮನೆಯಲ್ಲಿ ಮಲಗಿದ್ದು, ಬೆಳಿಗ್ಗೆ ತಡವಾಗಿ ಎಚ್ಚೆತ್ತಿದ್ದು, ಈ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದೆ.

    ಕಳ್ಳರು ಪ್ರಜ್ಞೆ ತಪ್ಪಿಸುವ ರಾಸಾಯನಿಕ ವಸ್ತು ಸಿಂಪಡಿಸಿರಬಹುದು ಎಂದು ಶಂಕಿಸಲಾಗಿದೆ. ಸಾಮಾನ್ಯ ವಾಗಿ ಮುನೀರ್ ಮುಂಜಾನೆ 4 ಗಂಟೆಗೆ ಏಳುತ್ತಿದ್ದು, ಇಂದು ಬೆಳಿಗ್ಗೆ ಎಂಟು ಗಂಟೆಗೆ ಎಚ್ಚರವಾಗಿದೆ. ಇದರಿಂದ ಪ್ರಜ್ಞೆ ತಪ್ಪಿಸುವ ರಾಸಾಯನಿಕ ಸ್ಪ್ರೇ ಮಾಡಿ ಕಳ್ಳರು ಕೃತ್ಯ ನಡೆಸಿರಬಹುದು ಎಂದು ಸಂಶಯಿಸಲಾಗಿದೆ. ಇನ್ನು ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply