Connect with us

    DAKSHINA KANNADA

    ಮಂಗಳೂರು ಚಿನ್ನಾಭರಣ ಅಂಗಡಿಯ ಸಿಬ್ಬಂದಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

    ಮಂಗಳೂರು ಮಾರ್ಚ್ 3 : ಮಂಗಳೂರಿನ ಚಿನ್ನಾಭರಣ ಅಂಗಡಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.


    ಬಂಧಿತ ಆರೋಪಿಯನ್ನು ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಿಂದ ಗುರುವಾರ ಅಪರಾಹ್ನ ಬಂಧಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.


    ಮಂಗಳೂರಿನ ಹಂಪನಕಟ್ಟೆಯಲ್ಲಿರುವ ‘ಮಂಗಳೂರು ಜ್ಯುವೆಲ್ಲರ್ಸ್‌’ ಎಂಬ ಚಿನ್ನಾಭರಣ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು. ಅಂದು ಮಧ್ಯಾಹ್ನ ಅಂಗಡಿಯ ಮಾಲಕ ಊಟಕ್ಕೆ ತೆರಳಿ ಹಿಂದಿರುಗಿದ ವೇಳೆ ಮಾಸ್ಕ್ ಧರಿಸಿದ್ದ ದುಷ್ಕರ್ಮಿಯೋರ್ವ ಅವರನ್ನು ಚೂರಿಯಿಂದು ಕೊಲೆ ಮಾಡಿ ಪರಾರಿಯಾಗಿರುವುದಾಗಿ ಜ್ಯುವೆಲ್ಲರಿಯ ಮಾಲಕ ಕೇಶವ ಆಚಾರ್ಯ ಬಂದರು ಪೊಲೀಸ್ ಠಾಣೆಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದರು.

    ಈ ವೇಳೆ ಜ್ಯುವೆಲ್ಲರಿಯಲ್ಲಿ ಪ್ರದರ್ಶನಕ್ಕಿಡಲಾಗಿದ್ದ ಚಿನ್ನಾಭರಣದಲ್ಲಿ ಕೆಲವು ಕಳವಾಗಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದರು. ವಿವಿಧ ಆಯಾಮದಲ್ಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶಂಕಿತ ಆರೋಪಿಯ ಸಿಸಿಟಿವಿ ಕ್ಯಾಮರಾ ಚಿತ್ರ ಬಿಡುಗಡೆಗೊಳಿಸಿದ್ದರು. ಇದೀಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

     

    Share Information
    Advertisement
    Click to comment

    You must be logged in to post a comment Login

    Leave a Reply