LATEST NEWS
ಮಂಗಳೂರಿನಲ್ಲಿ ಜಿಯೊ 5ಜಿ ಆರಂಭ

ಮಂಗಳೂರು ಜನವರಿ 11 : ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಿಲಯನ್ಸ್ ಜಿಯೋ ಮಂಗಳವಾರ 5ಜಿ ಸೇವೆ ಆರಂಭಿಸಿದೆ. ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ 5ಜಿ ಸೇವೆಗಳನ್ನು ರಿಲಯನ್ಸ್ ಜಿಯೊ ಆರಂಭಿಸಿದೆ.
5ಜಿ ವೆಲ್ಕಮ್ ಆಫರ್ ಅಡಿಯಲ್ಲಿ ಜಿಯೊ ಗ್ರಾಹಕರು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್ + ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ. ಮಂಗಳೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರ, ಜಿಯೋದ 5ಜಿ ಸೇವೆಗಳ ಪ್ರಾರಂಭದೊಂದಿಗೆ ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರೆ ಜೊತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್‌ಎಂಇಗಳು ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ. ಜಿಯೋ ವೆಲ್ಕಮ್ ಆಫರ್ ಮೂಲಕ 1 ಜಿಬಿಪಿಎಸ್+ ವೇಗದಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅನಿಯಮಿತ ಡೇಟಾ ಅನುಭವಿಸಬಹುದು ಎಂದು ಪ್ರಕಟಣೆ ಹೇಳಿದೆ.
