Connect with us

FILM

ಸಿನೆಮಾ ಇಂಡಸ್ಟ್ರೀ ಸಹವಾಸವೇ ಬೇಡ ಎಂದ ಅಶ್ವಿನಿ ನಕ್ಷತ್ರ ಖ್ಯಾತಿ ನಟ ಜೆಕೆ

ಬೆಂಗಳೂರು ಜೂನ್ 03: ಖ್ಯಾತ ನಟ ಕಿರುತೆರೆ ಅಶ್ವಿನಿ ನಕ್ಷತ್ರ ಧಾರವಾಹಿಯ ಖ್ಯಾತಿಯ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಇದೀಗ ಸಿನೆಮಾ ಇಂಡಸ್ಟ್ರೀಯನ್ನೇ ಬಿಡಲು ಹೊರಟಿದ್ದಾರೆ. ‘ಗೌರವ ಇಲ್ಲದ ಕಡೆ ನಾನು ಇರಲ್ಲ. ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಚೆನ್ನಾಗಿದ್ದಾಗಲೇ ಸಿನಿಮಾ ಇಂಡಸ್ಟ್ರಿ ಬಿಡುತ್ತಿದ್ದೇನೆ’ ಎಂದಿದ್ದಾರೆ.


ಕೆಲವರು ಬಹಳ ತೊಂದರೆ ಕೊಟ್ಟಿದ್ದಾರೆ. ಹಿಂದಿ ಧಾರಾವಾಹಿ ಮಾಡುತ್ತಿದ್ದೆ ಒಳ್ಳೆಯ ಹೆಸರು ಗಳಿಸಿದ್ದೆ. ಹಿಂದಿ ಸಿನಿಮಾ ಒಂದರ ಅವಕಾಶ ಸಹ ನನಗೆ ದೊರಕಿತ್ತು ಇನ್ನೇನು ಚಿತ್ರೀಕರಣ ಪ್ರಾರಂಭವಾಗಬೇಕು ಎಂಬ ಸಮಯದಲ್ಲಿ ಅಲ್ಲಿಗೆ ಕರೆ ಮಾಡಿ ನನಗೆ ಸಿಕ್ಕ ಅವಕಾಶವನ್ನು ತಪ್ಪಿಸಲಾಯ್ತು. ಇಲ್ಲಿಯೂ ಸಹ ನನಗೆ ಬರಬೇಕಿದ್ದ ಅವಕಾಶವನ್ನು ತಪ್ಪಿಸಿದರು. ನನಗೇ ನೇರವಾಗಿ ಸವಾಲು ಹಾಕಿ 2022 ರ ವೇಳೆಗೆ ಇಂಡಸ್ಟ್ರಿ ಬಿಡುಸುತ್ತೇವೆ ಎಂದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ನನಗೆ ಬರುವ ಸಿನಿಮಾ ಅವಕಾಶಗಳನ್ನು ತಪ್ಪಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿತ್ತು ಅದಕ್ಕೂ ಕಲ್ಲು ಹಾಕಿದರು. ದುಷ್ಟರಿಂದ ನಾನು ದೂರ ಇರುತ್ತೇನೆ. ಹಾಗಾಗಿ ಸಿನಿಮಾ ಇಂಡಸ್ಟ್ರಿ ನನಗೆ ಬೇಡ. ನನಗೆ ನೆಮ್ಮದಿ ಮುಖ್ಯ. ನನ್ನ ಮಾತು ಯಾರಿಗೆ ಅರ್ಥವಾಗಬೇಕು ಅವರಿಗೆ ಅರ್ಥ ಆದರೆ ಸಾಕು. ಇಂಡಸ್ಟ್ರಿಯಲ್ಲಿ 14ವರ್ಷದಿಂದ ಇದ್ದೇನೆ. ನಟನೆ ನನ್ನ ಫ್ಯಾಶನ್​​. ಈ ವೃತ್ತಿ ಇಲ್ಲ ಅಂದರೆ ಬೇರೆ ಇದೆ. ನಾನು ವಿದ್ಯಾವಂತʼʼ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *