LATEST NEWS
ರಾಘವೇಶ್ವರ ಸ್ವಾಮೀಜಿ ಆರೋಪ ಮುಕ್ತ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಮೂರ್ತಿ
ರಾಘವೇಶ್ವರ ಸ್ವಾಮೀಜಿ ಆರೋಪ ಮುಕ್ತ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಮೂರ್ತಿ
ಬೆಂಗಳೂರು, ಜನವರಿ 12: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪದಲ್ಲಿ ರಾಘವೇಶ್ವರ ಭಾರತೀ ಶ್ರೀಗಳನ್ನು ಆರೋಪ ಮುಕ್ತ ಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹಿಂದೆ ಸರಿದಿದ್ದಾರೆ.
‘ನಾಲ್ಕು ವರ್ಷಗಳ ಅವಧಿಯಲ್ಲಿ ಸ್ವಾಮೀಜಿ ನನ್ನ ಮೇಲೆ 154 ಬಾರಿ ಅತ್ಯಾಚಾರ ನಡೆಸಿದ್ದಾರೆ’ ಎಂದು ರಾಮಕಥಾ ಗಾಯಕಿ ಮಾಡಿದ್ದ ಆರೋಪ ಪ್ರಕರಣದಲ್ಲಿ ಸ್ವಾಮೀಜಿ ಖುಲಾಸೆಯಾಗಿದ್ದರು.
ಸೆಷನ್ಸ್ ನ್ಯಾಯಾಲಯದ ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.
ಪ್ರಕರಣ ಸಂಬಂಧ ಏಕಸದಸ್ಯ ನ್ಯಾಯಪೀಠದ ಮುಂದಿರುವ ಈ ಮೇಲ್ಮನವಿ ವಿಚಾರಣೆ ಇಂದು ನಿಗದಿಯಾತ್ತು.
ಆದರೆ ರಾಘವೇಶ್ವರ ಭಾರತೀ ಶ್ರೀಗಳನ್ನು ಆರೋಪ ಮುಕ್ತ ಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹಿಂದೆ ಸರಿದಿದ್ದಾರೆ.
You must be logged in to post a comment Login