Connect with us

    LATEST NEWS

    ಭಾರಿ ಮಳೆ ಹಿನ್ನಲೆ ನಾಳೆ (ಜುಲೈ 23) ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ

    ಭಾರಿ ಮಳೆ ಹಿನ್ನಲೆ ನಾಳೆ (ಜುಲೈ 23) ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ

    ಉಡುಪಿ ಜುಲೈ 22: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ಆದೇಶಿಸಿದ್ದಾರೆ.

    ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅಲ್ಲದೆ ನಾಳೆ ಕೂಡ ಹವಾಮಾನ ಇಲಾಖೆ ಮುನ್ಸೂಚನೆಯಿಂದ ಉಡುಪಿ ಜಿಲ್ಲೆಯಲ್ಲಿ ನಾಳೆ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಕೂಡ ಘೋಷಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply