LATEST NEWS
ಜುಲೈ 26 ರಂದು ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಜುಲೈ 26 ರಂದು ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಉಡುಪಿ ಜುಲೈ 25: ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಅವರು ಜುಲೈ 26 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲ ಜುಲೈ 26 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವಸ್ಥಾನಕ್ಕೆ ಸಾರ್ವಜನಿಕ ದರ್ಶನದ ಅವಧಿಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.
ಕಳೆದ ವರ್ಷ ಅಗಸ್ಟ್ ನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ದೇವಸ್ಥಾನದಲ್ಲಿ ಚಂಡಿಕಾಹೋಮ ನಡೆಸಿದ್ದರು.

ಇದು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಅವರ 2ನೇ ಬಾರಿಯ ಕೊಲ್ಲೂರು ಭೇಟಿಯಾಗಿದ್ದು ಈ ಹಿನ್ನಲೆಯಲ್ಲಿ ಕೊಲ್ಲೂರು ದೇವಸ್ಥಾನದಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗುತ್ತಿದೆ.