Connect with us

FILM

ಮಂಗಳೂರಿನಲ್ಲಿ ಪ್ರದರ್ಶನ ಕಂಡ ರಜನಿಕಾಂತ್ ಅಭಿನಯದ ಕಾಲಾ ಚಿತ್ರ

ಮಂಗಳೂರಿನಲ್ಲಿ ಪ್ರದರ್ಶನ ಕಂಡ ರಜನಿಕಾಂತ್ ಅಭಿನಯದ ಕಾಲಾ ಚಿತ್ರ

ಮಂಗಳೂರು ಜೂನ್ 7: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ಕಂಡುಬಂದಿದ್ದು ಕನ್ನಡ ಪರ ಸಂಘಟನೆಗಳು ಕಾಲಾ ಚಿತ್ರ ಪ್ರದರ್ಶನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ ಮಂಗಳೂರಿನಲ್ಲಿ ಮಾತ್ರ ರಜನಿಕಾಂತ್ ಅಭಿನಯದ ತಮಿಳು ಚಲನಚಿತ್ರ ಕಾಲಾ ಬಿಡುಗಡೆಯಾಗಿದೆ.

ಮಂಗಳೂರಿನ ಭಾರತ್ ಮಾಲ್ ನ ಬಿಗ್ ಸಿನಿಮಾ ಮತ್ತು ಪೋರಂ ಮಾಲ್ ನ ಪಿವಿಆರ್ ಸಿನಿಮಾದಲ್ಲಿ ಕಾಲಾ ಚಿತ್ರ ಪ್ರದರ್ಶನಗೊಂಡಿದೆ. ಜಿಲ್ಲೆಯಲ್ಲಿ ರಜನಿಕಾಂತ್ ಚಿತ್ರ ಬಿಡುಗಡೆಗೆ ಯಾವುದೇ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಕಾರಣ ಚಿತ್ರ ಪ್ರದರ್ಶನಕ್ಕೆ ಯಾವುದೇ ತೊಂದರೆಯಾಗಿಲ್ಲ, ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.