Connect with us

BANTWAL

ಅಂತರಾಷ್ಟ್ರೀಯ ಕಬ್ಬಡಿ ಆಟಗಾರ ಉದಯ ಚೌಟ ನಿಧನ

ಬಂಟ್ವಾಳ ಮೇ 21: ವಿಶ್ವಕಪ್ ಕಬ್ಬಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.


ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು.ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Advertisement
Click to comment

You must be logged in to post a comment Login

Leave a Reply