LATEST NEWS
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟ – ಅಪಾರ ಸಾವು ನೋವು ಸಾಧ್ಯತೆ

ಕಾಬೂಲ್ :ಕೊನೆಗೂ ಅಂತರಾಷ್ಟ್ರೀಯ ಬೇಹುಗಾರಿಕಾ ಸಂಸ್ಥೆಗಳು ಹೇಳಿದ ಹಾಗೆ ಕಾಬೂಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, 13ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಹಮೀದ್ ಕರ್ಜೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಗುರುವಾರ ರಾತ್ರಿ ಪ್ರಬಲ ಬಾಂಬ್ ಸ್ಫೋಟಿಸಿದೆ. ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಅಫ್ಘಾನ್ ನಾಗರಿಕರ ಜೊತೆಗೆ ಅಮೆರಿಕ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಇದ್ದರು ಎನ್ನಲಾಗಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿರುವುದನ್ನು ಅಮೆರಿಕ ರಾಜಧಾನಿ ವಾಷಿಂಗ್ಟನ್ನಲ್ಲಿ ಪೆಂಟಗನ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಾಂಬ್ ಸ್ಫೋಟದಿಂದ ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿರುವ ಚಿತ್ರಗಳನ್ನು ಟ್ವಿಟರ್ನಲ್ಲಿಯೂ ಹಲವರು ಹಂಚಿಕೊಂಡಿದ್ದಾರೆ.
ಆತ್ಮಾಹುತಿ ಬಾಂಬ್ ದಾಳಿ ನಡೆದಿರುವ ಸಾಧ್ಯತೆ ಇದ್ದು, ಅಫ್ಘಾನ್ ನಾಗರಿಕರು ವಿಮಾನ ನಿಲ್ದಾಣ ಪ್ರವೇಶಿಸಲು ಮುಗಿಬಿದ್ದು, ನೂಕುನುಗ್ಗಲು ಉಂಟಾದ ವೇಳೆಯಲ್ಲಿಯೆ ಬಾಂಬ್ ಸ್ಫೋಟಿಸಿದೆ. ಬಾಂಬ್ ಸ್ಫೋಟಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ ಅಫ್ಘಾನಿಗಳು ದೊಡ್ಡಸಂಖ್ಯೆಯಲ್ಲಿದ್ದರು ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
Massacre of Afghans. Entire families destroyed. My heart breaks for Kabul. #NOTJUSTNUMBERSLIVES pic.twitter.com/6NrkDf24ID
— BILAL SARWARY (@bsarwary) August 26, 2021