Connect with us

    FILM

    ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲು

    ಕೋಲ್ಕತ್ತಾ: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


    ಸೋಮವಾರ ನಡೆದ ಕಾರು ಅಪಘಾತದಲ್ಲಿ ಭುಬನ್ ಗಾಯಗೊಂಡು ಸುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರೋ ರಾತ್ರಿ ಫೇಮಸ್ ಆಗಿರುವ ಭುಬನ್, ಇತ್ತೀಚೆಗೆ ಕಾರು ಖರೀದಿ ಮಾಡಿದ್ದಾರೆ. ಈ ಕಾರಿನ ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಭುಬನ್ ಎದೆಗೆ ಏಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಅವರು ಆಸ್ಪತ್ರೆಯಲ್ಲಿದ್ದಾರೆ.

    ಕಡಲೆ ಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಭುಬನ್ ಅವರು ಕಚ್ಚಾ ಬದಾಮ್ ಹಾಡು ಹಾಡಿ ರಾತ್ರಿ ಬೆಳಗಾವುದೊರಳಗೆ ಭಾರೀ ಫೇಮಸ್ ಆಗಿದ್ದರು. ಇವರ ಹಾಡು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ಅನೇಕ ಮಂದಿ ರೀಲ್ಸ್ ಕುಡ ಮಾಡುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply