DAKSHINA KANNADA
ಪುತ್ತೂರು: ಪ್ರಧಾನಿ ಮೋದಿಯನ್ನು ಉಲ್ಲೇಖಿಸಿ ಆಮಂತ್ರಣ ಪತ್ರಿಕೆ ಹಂಚಿದ್ದ ವರನ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು..!

ಪುತ್ತೂರು : ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯ ಬಗ್ಗೆ ಉಲ್ಲೇಖ ಮಾಡಿದ ವರನ ಕಡೆಯವರಿಗೆ ಈಗ ಫಜೀತಿಯಾಗಿದೆ. ಮದುವೆ ಕಳೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿದ್ದಾರೆ.
ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡುವುದೇ ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿತ್ತು. ಕಡಬದ ಅಲಂತಾಯ ನಿವಾಸಿ ಶಿವಪ್ರಸಾದ್ ಎನ್ನುವವರ ಮದುವೆ ಆಮಂತ್ರಣ ಪತ್ರಿಕೆ ಇದಾಗಿದ್ದು, ಮಾರ್ಚ್ 1 ರಂದು ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತು ಆದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.
