DAKSHINA KANNADA
ಕಡಬ: ಮುಖಾಮುಖಿ ಕಾರು ಢಿಕ್ಕಿ, ಇಬ್ಬರು ಗಂಭೀರ
ಕಡಬ, ಜೂನ್ 25: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ.
ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ-800 ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರಿನ ನಡುವೆ ಕುಂಡಾಜೆ ಸಮೀಪದ ಕಿರು ಸೇತುವೆಯ ತಿರುವಿನಲ್ಲಿ ಮುಖಾಮುಖೀ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸದ್ಯ ಅಪಘಾತದಿಂದ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಸ್ಥ ಳಕ್ಕೆ ಕಡಬ ಠಾಣಾ ಎಸ್.ಐ ರುಕ್ಮ ನಾಯ್ಕ್, ಎ.ಎಸ್.ಐ ಸುರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
You must be logged in to post a comment Login