DAKSHINA KANNADA
ಕಡಬ – ಜೀಪ್ ಕಾರು ನಡುವೆ ಅಪಘಾತ – ನಾಲ್ವರಿಗೆ ಗಾಯ

ಪುತ್ತೂರು ಅಕ್ಟೋಬರ್ 30: ಜೀಪ್ ಹಾಗೂ ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಜೀಪಿನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
