Connect with us

    DAKSHINA KANNADA

    ನೆಲ್ಯಾಡಿಯಲ್ಲಿ ಬೈಕಿಗೆ ಕಾರು ಡಿಕ್ಕಿ : ತಾ.ಪಂ.ಮಾಜಿ ಸದಸ್ಯ ಆಸ್ಪತ್ರೆಗೆ ದಾಖಲು..!

    ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಇಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿದ್ದಾರೆ.

    ಕಡಬ : ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಇಂದು ಬೆಳಗ್ಗೆ ಆಲ್ಟೊ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿದ್ದಾರೆ.

    ಬೈಕ್ ಸವಾರ , ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಲಕ್ಷ್ಮೀ ನಾರಾಯಣರ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.

    ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply