DAKSHINA KANNADA
ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ, ಕಡಬದಲ್ಲಿ ಕಾಂಗ್ರೆಸ್ ನಾಯಕರ ಕಿತ್ತಾಟ..!

ಕಡಬ : ಅಲ್ಪ ಸಂಖ್ಯಾತರ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮುಖಂಡರ ಮಧ್ಯೆ ಗದ್ದಲ, ಕಿತ್ತಾಟ ನಡೆದಿದೆ ಎಂದು ತಿಳಿದು ಬಂದಿದೆ.
ಲೋಕಸಭಾ ಚುನಾವಣೆಯ ಪ್ರಚಾರ ಸಭೆ ಕಡಬದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಜಿಲ್ಲೆ, ರಾಜ್ಯದ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಆದ್ರೆ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅಲ್ಪ ಸಂಖ್ಯಾತ ಸಮುದಾಯವನ್ನು ಕಡೆಗಣಿಸುತ್ತಿದೆ ಎಂದು ಎಂಬ ಆರೋಪದ ಮಾತುಗಳು ಕೇಳಿ ಬಂದವು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ನಾಯಕರ ಮಧ್ಯೆ ಕಿತ್ತಾಟ, ಹೊಯ್ ಕೈ ನಡೆದು ಹೋಯಿತು ಎನ್ನಲಾಗಿದೆ. ಅನೇಕ ಹಿರಿಯ ಮುಖಂಡರು ಮಧ್ಯೆ ಪ್ರವೇಶಿಸಿ ಸಮಾಧಾನ ಪಡಿಸಲು ಯತ್ನಿಸಿದ್ದರೂ ಕೆಲ ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದರು.
