Connect with us

DAKSHINA KANNADA

ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..

ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು ಮುಖಾಮುಖಿ ಡಿಕ್ಕಿ ಯಾಗಿದ್ದು , ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.