DAKSHINA KANNADA
ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ಓರ್ವನ ಬಂಧನ

ಕಡಬ, ಎಪ್ರಿಲ್ 23 : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, 70 ಕೆಜಿ ದನದ ಮಾಂಸದ ಸಹಿತ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕೊಯಿಲ ಗ್ರಾಮದ ಕೆಮ್ಮಾರ ನಿವಾಸಿ ಉಸ್ಮಾನ್ ಎಂಬವರ ಪುತ್ರ ಇಲ್ಯಾಸ್(33) ಎಂದು ಗುರುತಿಸಲಾಗಿದೆ. ಆರೋಪಿಯು ಶುಕ್ರವಾರದಂದು ಕೊಯಿಲ ಗ್ರಾಮದ ಬಡ್ಡಮೆ ನಿವಾಸಿ ಶ್ರೀಮತಿ ಮರಿಯಮ್ಮ ಎಂಬವರ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಕಡಬ ಪೊಲೀಸರು 70 ಕೆಜಿ ದನದ ಮಾಂಸ ಹಾಗೂ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹದಿನೈದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ