DAKSHINA KANNADA
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡಬದ ವ್ಯಕ್ತಿ ಶವವಾಗಿ ಪತ್ತೆ ..!
ಕಡಬ, ಅಕ್ಟೋಬರ್ 8: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದ ಯುವಕನ ಶವ ಹೊಸಮಠ ಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ.
ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್ ಎಂಬವರು ಮನೆಯಿಂದ ನಾಪತ್ತೆಯಾಗಿದ್ದರು, ವಿಷಯ ತಿಳಿದ ಮನೆಯವರು ವಿವಿಧ ಕಡೆಗಳಲ್ಲಿ ಹುಡುಕಾಡಿದರೂ ದಿನೇಶ್ ಅವರ ಸುಳಿವು ಪತ್ತೆಯಾಗಿರಲಿಲ್ಲ.
ಇದೀಗ ಹೊಸಮಠ ಹೊಳೆಯ ರಾಮಕಲ್ಲು ಎಂಬಲ್ಲಿ ಮೃತ ದೇಹ ಪತ್ತೆಯಾಗಿದೆ. ದಿನೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೃತದೇಹವನ್ನು ಕಡಬ ಪೋಲಿಸರ ಸಮ್ಮುಖದಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ತರಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.