DAKSHINA KANNADA
ಕಡಬ: ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವು..

ಕಡಬ, ಜೂನ್ 01: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿಯಲ್ಲಿ ವಿದ್ಯುತ್ ಕಂಬದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ.
