DAKSHINA KANNADA
ಕಡಬ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ, ಖ್ಯಾತ ಜ್ಯೋತಿಷಿಯ ಬಂಧನ..!
ಕಡಬ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧಿತರು. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
You must be logged in to post a comment Login