LATEST NEWS
ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ -ಖಾದರ್
ಮಂಗಳೂರು ಮೇ 17: ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಶಾಲೆಗಳಲ್ಲಿ ಶಾಸಕರೇ ಮುಂದೆ ನಿಂತು ರೈಫಲ್ ತರಭೇತಿ ನೀಡಿ ಆಯುಧ ಕೊಡುವುದು ತಾಲಿಬಾನ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ವಿರೋಧ ಪಕ್ಷದ ಉಪನಾಯಕ ಯ.ಟಿ ಖಾದರ್ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗೂಂಡಾಗಿರಿಯನ್ನು ಬೇರೆ ಬೇರೆ ಸಂಘ ಸಂಸ್ಥೆಗಳಿಗೆ ಹೊರಗುತ್ತಿಗೆ ನೀಡಿದೆ. ಗೃಹ ಸಚಿವರು, ಶಿಕ್ಷಣ ಸಚಿವರು ರಾಜ್ಯದ ಜನರಿಗೆ ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು. ಎನ್ ಸಿಸಿಯಂತಹ ಸಂಸ್ಥೆಗಳು ಇಂತಹ ತರಬೇತಿ ನೀಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಂತಹ ಸಂಸ್ಥೆಗಳಿಗೆ ಸರ್ಕಾರದ ಮಾನ್ಯತೆ ಇರುತ್ತದೆ. ಆದರೆ, ಕೊಡಗಿನ ಶಾಲೆಯಲ್ಲಿ ತರಬೇತಿ ಆಯೋಜಿಸಿದವರು ಯಾರು ? ಯಾರು ಬೇಕಾದರೂ ಈ ರೀತಿ ತರಬೇತಿ ನಡೆಸಬಹುದೇ ? ತರಬೇತಿ ನೀಡಿರುವ ಸಂಘಟನೆಯ ಉದ್ದೇಶ ಏನು ? ಈ ತರಬೇತಿ ಆಯೋಜಿಸುವ ಮುನ್ನ ಸ್ಥಳೀಯ ಜಿಲ್ಲಾಧಿಕಾರಿ, ಪೊಲೀಸರಿಂದ ಅನುಮತಿ ಪಡೆಯಲಾಗಿದೆಯೇ ? ಈ ಎಲ್ಲ ಅಂಶಗಳ ಬಗ್ಗೆ ತನಿಖೆ ನಡೆಸಿ, ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.