LATEST NEWS
ಕೊರೊನಾ ವಾರಿಯರ್ಸ್ ಗಳಿಗೆ ಸಂಬಳ ನಿಡದೇ ಸತಾಯಿಸಿದ ರಾಜ್ಯಸರಕಾರ
ಕೊರೊನಾ ವಾರಿಯರ್ಸ್ ಗಳಿಗೆ ಸಂಬಳ ನಿಡದೇ ಸತಾಯಿಸಿದ ರಾಜ್ಯಸರಕಾರ
ಮಂಗಳೂರು ಮೇ.30: ನ್ಯಾಷನಲ್ ಹೆಲ್ತ್ ಮಿಷನ್ ನಡಿಯಲ್ಲಿ ಬರುವ ವೈದ್ಯರು, ನರ್ಸ್,ಲ್ಯಾಬ್ ಟೆಕ್ನೀಷಿಯನ್ಸ್ ಗೆ ರಾಜ್ಯ ಸರಕಾರ ಕಳೆದ ಎರಡು ತಿಂಗಳಿನಿಂದ ಸಂಬಳ ನೀಡದೆ ಸತಾಯಿಸುತ್ತಿದ್ದು, ಕೊರೊನಾ ವಾರಿಯರ್ಸ್ ಗಳನ್ನು ರಾಜ್ಯಸರಕಾರ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾದ ಈ ಸಂದಿಗ್ದ ಪರಿಸ್ಥಿತಿಯಲ್ಲಿ ರಾಜ್ಯ ಸರಕಾರ ಕೊರೊನಾ ವಿರುದ್ದ ಹೊರಾಟ ನಡೆಸುತ್ತಿರುವ ವೈದ್ಯರ ಸಂಬಳವನ್ನೇ ತಡೆ ಹಿಡಿದಿದ್ದು, ನ್ಯಾಷನಲ್ ಹೆಲ್ತ್ ಮಿಷನ್ ನಡಿಯಲ್ಲಿ ಬರುವ ವೈದ್ಯರು, ನರ್ಸ್,ಲ್ಯಾಬ್ ಟೆಕ್ನೀಷಿಯನ್ಸ್ ಗಳು ಸೇರಿದಂತೆ ರಾಜ್ಯದಲ್ಲಿ ಸುಮಾರು 26 ಸಾವಿರ ಮಂದಿಗೆ ಸರ್ಕಾರ ಸಂಬಳ ನೀಡಿಲ್ಲ ಎಂದು ಆರೋಪಿಸಿದರು. ಕೊರೊನಾ ಸಂದರ್ಭ ಎರಡು ತಿಂಗಳು ಹಗಲು ರಾತ್ರಿಯನ್ನದೇ ವೈದ್ಯರು ಕೆಲಸ ಮಾಡಿದ್ದಾರೆ, ರಾಜ್ಯ ಸರ್ಕಾರ ತಕ್ಷಣ ವೈದ್ಯರಿಗೆ ಸಂಬಳ ನೀಡದಿದ್ರೆ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ ಎನ್ನುವುದು ಇದರಿಂದ ತಿಳಿದು ಬರುತ್ತದೆ. ಕೊರೊನಾ ಸಂಧರ್ಭದಲ್ಲೇ ವೇತನ ನೀಡದೆ ಸತಾಯಿಸಿದ್ದಾರೆ. ಇನ್ನೂ ರಾಜ್ಯದಲ್ಲಿ ಕೊರೊನಾ ರೋಗಿಗಳ ಸ್ಥಿತಿ ಹೇಗಿರಬೇಡ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಗಂಭೀರ ಆರೋಪ ಮಾಡಿದ್ದಾರೆ.