LATEST NEWS
ಅಭಿವೃದ್ಧಿ ಕೆಲಸ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ – ಖಾದರ್

ಮಂಗಳೂರು ಜನವರಿ 04: ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಗುಂಡಿ ಮುಚ್ಚುವಂತಹ ಅಭಿವೃದ್ಧಿ ಕೆಲಸ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ ಆದರೆ ಜನರ ಭಾವನೆ ಕೆದಕುವ ಕೆಲಸ ಮಾಡುತ್ತಾರೆ ಎಂದು ನಳಿನ್ ಕುಮಾರ್ ಹೇಳಿಕೆ ವಿರುದ್ದ ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ನಳಿನ್ ಹೇಳಿಕೆಗೆ ಕಿಡಿಕಾರಿದರು, ಈ ಡಬಲ್ ಇಂಜಿನ್ ಸರ್ಕಾರವನ್ನು ಕಾಲ ಬಂದಾಗ ಜನರು ಗುಜರಿಗೆ ಹಾಕುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.’ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಗುಂಡಿ ಮುಚ್ಚುವಂತಹ ಅಭಿವೃದ್ಧಿ ಕೆಲಸ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ. ಇಷ್ಟು ವರ್ಷದಲ್ಲಿ ಅವರು ಅಭಿವೃದ್ಧಿ ಕೆಲಸ ಮಾಡಿಲ್ಲ. ಕುಚ್ಚಲಕ್ಕಿ ತರಲು ಸಿಎಂಗೆ ಮನವಿ ಕೊಟ್ಟದ್ದೇ ಬಂತು. ಜನರಿಗೆ ರೇಷನ್ ಕಾರ್ಡ್ ಕೊಡುವ ಯೋಗ್ಯತೆ ಇಲ್ಲ. ಅಭಿವೃದ್ಧಿ ಕೆಲಸ ಮಾಡುವ ಸ್ವಭಾವವಿಲ್ಲ. ಇವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಜನರಿಗೆ ಇದೀಗ ಎಲ್ಲಾ ಅರ್ಥವಾಗಿದೆ’ ಎಂದರು.
