LATEST NEWS
ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದಾರೆ – ಯು.ಟಿ ಖಾದರ್

ಮಂಗಳೂರು ಎಪ್ರಿಲ್ 11: ಸಿಎಂ ಮೌನವಾಗಿ ರಾಜ್ಯವನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಪಕ್ಷದ ನಾಯಕರು, ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಈಗಲಾದರೂ ಮಾತಾಡಬೇಕು. ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು.
ಕರ್ನಾಟಕ ರಾಜ್ಯಕ್ಕೆ ಅದರದ್ದೇ ಆದ ಇತಿಹಾಸ ಸಂಸ್ಕೃತಿ ಇದೆ. ಬಿಜೆಪಿಯಿಂದ ರಾಜ್ಯದ ಘನತೆಗೆ ಕಪ್ಪು ಚುಕ್ಕೆಯಾಗಿದೆ. 95% ಜನರು ಈ ಬೆಳವಣಿಗೆಯ ಬಗ್ಗೆ ಸರ್ಕಾರವನ್ನು ತಿರಸ್ಕಾರ ಮಾಡುತ್ತಾರೆ. ರಾಜ್ಯ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ದಿವಾಳಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ. ಮುಖ್ಯಮಂತ್ರಿ ಈ ಬಗ್ಗೆ ಮಾತನಾಡಲೇ ಬೇಕು. ಇಲ್ಲವಾದಲ್ಲಿ ಕನ್ನಡಿಗರು ಸರ್ಕಾರವನ್ನು ಕ್ಷಮಿಸೋದೇ ಇಲ್ಲ. ಕೋಮುವಾದಿಗಳ ವಿವಾದವನ್ನು ಸರ್ಕಾರ ಮಟ್ಟಹಾಕಬೇಕು ಎಂದು ವಾಗ್ದಾಳಿ ನಡೆಸಿದರು.
