Connect with us

LATEST NEWS

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ವರ್ಗಾವಣೆಗೆ ಟ್ವೀಟರ್ ನಲ್ಲಿ ಕಿಡಿಕಾರಿದ ಯು.ಟಿ ಖಾದರ್

ಮಂಗಳೂರು ಜುಲೈ 29: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆಗೆ ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.


ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ. ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ನ್ಯಾಯ ಎಲ್ಲಿದೆ ಎಂದು ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.

ಜಾನುವಾರುಗಳನ್ನು ಸಾಗಾಟ ಮಾಡುವ ವಾಹನ ಹಾಗೂ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ನಡೆದ ಅಧಿಕಾರಿಗಳ ಸಭೆಯೊಂದರಲ್ಲಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಇದರ ಬೆನ್ನಲ್ಲೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

Facebook Comments

comments