LATEST NEWS
ಕದ್ರಿ ದೇವಸ್ಥಾನ ಜಾತ್ರಾ ಮಹೋತ್ಸವ – ಮುಸ್ಲಿಂರಿಗೆ ವ್ಯಾಪಾರಕ್ಕೆ ನಿರ್ಬಂಧ….?

ಮಂಗಳೂರು ಜನವರಿ 20: ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಕದ್ರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಬ್ಯಾನರ್ ಹಾಕಲಾಗಿದ್ದು, ಅದನ್ನು ತೆರವುಗೊಳಿಸಲಾಗಿದೆ.
ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿರುವ ಬ್ಯಾನರ್‌ನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದ ಕದ್ರಿ ಘಟಕದ ಹೆಸರು ಇತ್ತು. ‘ಸನಾತನ ಧರ್ಮದ ಆಚರಣೆ ಮತ್ತು ನಂಬಿಕೆಯಲ್ಲಿ ವಿಶ್ವಾಸ ಇರುವ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಇದೆ. ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು, ಕದ್ರಿ ದೇವಸ್ಥಾನ. ಇಂತಹ ಮನಃಸ್ಥಿತಿ ಮತ್ತು ವಿಗ್ರಹಾರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿತ್ತು.

ಜಾತ್ರೆಯ ವಿಧಿಗಳು ಆರಂಭ ಆಗಿರುವುದರಿಂದ ರಸ್ತೆಯುದ್ದಕ್ಕೂ ಸ್ಟಾಲ್‌ಗಳನ್ನು ಅಳವಡಿಸಲಾಗಿದೆ. ಇಲ್ಲಿ ಮುಸ್ಲಿಂ ವ್ಯಾಪಾರಿಗಳು ಹಲವು ವರ್ಷಗಳಿಂದ ವ್ಯಾಪಾರಕ್ಕೆ ಬರುತ್ತಿದ್ದರು. ಅಂತೆಯೇ ಈ ಬಾರಿ ಕೂಡ ಅಂಗಡಿಗಳನ್ನು ಹಾಕಿದ್ದರು. ಆದರೆ, ಅವರನ್ನು ಇಲ್ಲಿಂದ ವಾಪಸ್ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.