Connect with us

    KARNATAKA

    ಕಲಬುರಗಿ – ಭೀಕರ ರಸ್ತೆ ಅಪಘಾತಕ್ಕೆ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಐವರು ಸಾವು

    ಕಲಬುರಗಿ ನವೆಂಬರ್ 02: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಸಂಭವಿಸಿದೆ.


    ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಬೈಕಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಮೃತರು ಅಫಜಲಪೂರನಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply