KARNATAKA
ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ಮಣಿಕಂಠ ಅವರ ವಾಹನ ತಡೆದು ಬಿಯರ್ ಬಾಟಲ್ಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ.
ಸದ್ಯ ಘಟನೆಯಲ್ಲಿ ಗಾಯಗೊಂಡಿರುವ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ.

Continue Reading