LATEST NEWS
VIDEO: ನಡು ರಸ್ತೆಯಲ್ಲಿ ತಲ್ವಾರ್ ಝಳಪಿಸುತ್ತಿದ್ದವನ ಮೇಲೆ ಪೊಲೀಸ್ ಪೈರಿಂಗ್..!!

ಕಲಬುರಗಿ ಫೆಬ್ರವರಿ 06: ಮಾರಕಾಸ್ತ್ರಗಳನ್ನು ಹಿಡಿದು ಜನರನ್ನು ಹೆದರಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸರು ಪೈರಿಂಗ್ ಮಾಡಿ ಅರೆಸ್ಟ್ ಮಾಡಿರುವ ಘಟನೆ ಕಲಬುರಗಿಯ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಆರೋಪಿಯನ್ನು ಅಬ್ದುಲ್ ಜಾಫರ್ ಸಾಬ್ ಎಂದು ಗುರುತಿಸಲಾಗಿದೆ. ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ತಲ್ವಾರ್ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ ಅಬ್ದುಲ್ ಜಾಫರ್ ಸಾಬ್ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು.

ಶರಣಾಗುವಂತೆ ಸೂಚಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು ಗುಂಡು ಹಾರಿಸಿದರು. ಕೊನೆಯ ಗುಂಡು ಆತನ ಕಾಲಿಗೆ ಬಡಿದಿದ್ದರಿಂದ ಕೆಳಗೆ ಬಿದ್ದ. ನಂತರ ಆತನನ್ನು ಸುತ್ತುವರೆದು ಬಂಧಿಸಿದರು.