Connect with us

    LATEST NEWS

    ಎರಡನೇ ಬಾರಿ ಕಮಲಶಿಲೆಯ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ

    ಕುಂದಾಪುರ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ.


    ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿ- ಕಾರ್ಕಳ ದಲ್ಲಿ ನಿರಂತರ ಮಳೆಯಾಗುತ್ತಿದೆ. ಕುಬ್ಜಾ ನದಿ ಮತ್ತೆ ತುಂಬಿ ಹರಿಯುತ್ತಿದೆ. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನೀರು ನುಗ್ಗಿದ್ದು. ಈ ವರ್ಷದಲ್ಲಿ ಎರಡನೇ ಬಾರಿಗೆ ನದಿ ನೀರು ದೇಗುಲದ ಗರ್ಭಗುಡಿಗೆ ಪ್ರವೇಶಿಸಿದೆ. ನಿನ್ನೆ ರಾತ್ರಿ 12.30 ರಿಂದ 2 ಗಂಟೆಯವರೆಗೆ ದೇಗುಲಕ್ಕೆ ನದಿ ನೀರು ಪ್ರವೇಶಿಸಿ ದುರ್ಗಾಪರಮೇಶ್ವರಿ ದೇವಿಯ ಪಾದ ಸ್ಪರ್ಶಿಸಿದೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನದಿಯ ಮಟ್ಟ ಇಳಿಕೆಯಾಗಿ ನೀರು ಸಂಪೂರ್ಣ ಇಳಿದು ಹೋಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply