Connect with us

UDUPI

ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ ನೀರು…!!

ಉಡುಪಿ ಅಗಸ್ಟ್ 4: ಇತಿಹಾಸ ಪ್ರಸಿದ್ಧ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ನುಗ್ಗಿದೆ. ಕುಬ್ಜಾ ನದಿಯಿಂದ ಆವೃತ್ತವಾಗಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗೆಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ.


ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ. ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ ಪ್ರವೇಶ ಮಾಡಿದ ಸಮಯದಲ್ಲಿ ಊರಿನ ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ಬಾರಿ ಕೊರೊನಾ ಭೀತಿ ಇರುವ ಕಾರಣ ದೇವಾಲಯದ ಆಸುಪಾಸಿನ ಒಂದಷ್ಟು ಕುಟುಂಬಗಳು ಮಾತ್ರ ಈ ವಿಶೇಷ ಸಂದರ್ಭದಲ್ಲಿ ದೇವರ ದರ್ಶನ ಗೈದರು.

Facebook Comments

comments