KARNATAKA
ನ.25-26 ಬೆಂಗಳೂರಿನಲ್ಲಿ ಕಂಬಳ ಕೂಟ -ಸಂಘಟಕ ಶಾಸಕ ಅಶೋಕ್ ಕುಮಾರ್ ರೈ
ನವೆಂಬರ್ 25ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕರು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಮಂಗಳೂರು : ನವೆಂಬರ್ 25ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕರು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಕಂಬಳ ಮಾಲಕರು ಮತ್ತು ಪದಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದ ಮುಖ್ಯಮಂತ್ರಿ ಉಪ ಮುಖ್ಯ ಮಂತ್ರಿ, ಸೂಪರ್ ಸ್ಟಾರ್ ರಜನಿಕಾಂತ್, ತಾರೆ ಐಶ್ವರ್ಯ ರೈ, ಬಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಸಿನಿಮಾ ಕ್ಷೇತ್ರದ ನಟನಟಿಯರ ದಂಡೇ ಈ ಕಂಬಳ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಪ್ರಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆ ಗಳ ಸುಮಾರು 130ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ.
ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿ ಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಸುಮಾರು 7ರಿಂದ 8ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿಯ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರ ಹಾಸ ಸನಿಲ್,ಮುರಳೀಧರ ರೈ,ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
You must be logged in to post a comment Login