ಬೆಂಗಳೂರು ಅಗಸ್ಟ್ 19 :ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿರು ಕಾಂತಾರ ಚಿತ್ರತಂಡ ಇದೀಗ ಒಂದೊಂದಾಗಿ ಪಾತ್ರಗಳ ಪರಿಚಯವನ್ನು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ರುಕ್ಮೀಣಿ ವಸಂತ್ ಅವರ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ತಂಡ ಇದೀಗ ಮತ್ತೊಂದು ಪ್ರಮುಖ ಪಾತ್ರದ ಫಸ್ಟ್ ಲುಕ್ ರೀವಿಲ್ ಮಾಡಿದೆ.

ಕನ್ನಡಗಿ ಹೆಚ್ಚಾಗಿ ಬಾಲಿವುಡ್ ಸಿನೆಮಾಗಳಲ್ಲಿ ಕಾಣಿಸಿಕೊಂಡಿರು ನಟ ಗುಲ್ಷನ್ ದೇವಯ್ಯ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಕುಲಶೇಖರ ಹೆಸರಿನ ಪಾತ್ರದಲ್ಲಿ ಗುಲ್ಷನ್ ದೇವಯ್ಯ ನಟಿಸುತ್ತಿದ್ದಾರೆ. ರಾಜನ ರೀತಿ ಪೋಷಾಕು ಧರಿಸಿ ಸಿಂಹಾಸನದ ಮೇಲೆ ಕುಳಿತಿರುವ ಗುಲ್ಷನ್ ದೇವಯ್ಯ ಅವರ ಚಿತ್ರವನ್ನು ಹೊಂಬಾಳೆ ಫಿಲಮ್ಸ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.