FILM
ನಾಲ್ಕನೇ ಬಾರಿ ರಾಷ್ಟ್ರಪ್ರಶಸ್ತಿ ಪಡೆದ ಕಂಗನಾ ರಾಣಾವತ್

ನವದೆಹಲಿ ಮಾರ್ಚ್ 22: ಖ್ಯಾತ ಹಿಂದಿ ಚಲನಚಿತ್ರ ನಟಿ ಕಂಗನಾ ರಾಣಾವತ್ ನಾಲ್ಕನೇ ಬಾರಿ ರಾಷ್ಟ್ರಪ್ರಶಸ್ತಿಯನ್ನು ಬಾಚಿಕೊಂಡಿದ್ದು, ತನ್ನ ಟೀಕಾಕಾರರಿಗೆ ಈ ಬಾರಿ ರಾಷ್ಟ್ರಪ್ರಶಸ್ತಿ ಮೂಲಕ ತಿರುಗೇಟು ನೀಡಿದ್ದಾರೆ.
ಇಂದು 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, 2019ನೇ ಸಾಲಿನ ಅತ್ಯುತ್ತಮ ನಟಿಯಾಗಿ ಕಂಗನಾ ರಣಾವತ್ ಹೊರಹೊಮ್ಮಿದ್ದಾರೆ. ಇದಾಗಲೇ ಮೂರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಕಂಗನಾ ಅವರಿಗೆ ಇದು ನಾಲ್ಕನೆಯ ರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ‘ಮಣಿಕರ್ಣಿಕಾ’ ಹಾಗೂ ‘ಪಂಗಾ’ ಚಿತ್ರದ ನಟನೆಗೆ ಈ ಬಾರಿ ಪ್ರಶಸ್ತಿ ಕಂಗನಾ ಅವರ ಪಾಲಾಗಿದೆ. ಸುಶಾಂತ್ ಸಿಂಗ್ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಚಿಚೋರ್ ಅತ್ಯುತ್ತಮ ಹಿಂದಿ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಮನೋಜ್ ಬಾಜಪೇಯಿ ಮತ್ತು ಧನುಷ್ ಕ್ರಮವಾಗಿ ಭೋಂಸ್ಲೆ ಮತ್ತು ಅಸುರನ್ ಚಿತ್ರಗಳಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.ತಲೈವಿ ಜಯಲಲೀತಾ ಪಾತ್ರದಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಕಂಗನಾಇನ್ನೂ ಬಿಡುಗಡೆಯಾಗಬೇಕಿರುವ ಮಲಿಯಾಳಂ ಚಿತ್ರ ಮರಕ್ಕರ್: ಅರಬಿಕಡಲಿಂಟೆ ಸಿಂಹಮ್ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.