Connect with us

FILM

ನಾಲ್ಕನೇ ಬಾರಿ ರಾಷ್ಟ್ರಪ್ರಶಸ್ತಿ ಪಡೆದ ಕಂಗನಾ ರಾಣಾವತ್

ನವದೆಹಲಿ ಮಾರ್ಚ್ 22: ಖ್ಯಾತ ಹಿಂದಿ ಚಲನಚಿತ್ರ ನಟಿ ಕಂಗನಾ ರಾಣಾವತ್ ನಾಲ್ಕನೇ ಬಾರಿ ರಾಷ್ಟ್ರಪ್ರಶಸ್ತಿಯನ್ನು ಬಾಚಿಕೊಂಡಿದ್ದು, ತನ್ನ ಟೀಕಾಕಾರರಿಗೆ ಈ ಬಾರಿ ರಾಷ್ಟ್ರಪ್ರಶಸ್ತಿ ಮೂಲಕ ತಿರುಗೇಟು ನೀಡಿದ್ದಾರೆ.


ಇಂದು 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, 2019ನೇ ಸಾಲಿನ ಅತ್ಯುತ್ತಮ ನಟಿಯಾಗಿ ಕಂಗನಾ ರಣಾವತ್​ ಹೊರಹೊಮ್ಮಿದ್ದಾರೆ. ಇದಾಗಲೇ ಮೂರು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿರುವ ಕಂಗನಾ ಅವರಿಗೆ ಇದು ನಾಲ್ಕನೆಯ ರಾಷ್ಟ್ರೀಯ ಪ್ರಶಸ್ತಿಯಾಗಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ‘ಮಣಿಕರ್ಣಿಕಾ’ ಹಾಗೂ ‘ಪಂಗಾ’ ಚಿತ್ರದ ನಟನೆಗೆ ಈ ಬಾರಿ ಪ್ರಶಸ್ತಿ ಕಂಗನಾ ಅವರ ಪಾಲಾಗಿದೆ. ಸುಶಾಂತ್​ ಸಿಂಗ್​ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಚಿಚೋರ್​ ಅತ್ಯುತ್ತಮ ಹಿಂದಿ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಮನೋಜ್ ಬಾಜಪೇಯಿ ಮತ್ತು ಧನುಷ್ ಕ್ರಮವಾಗಿ ಭೋಂಸ್ಲೆ ಮತ್ತು ಅಸುರನ್ ಚಿತ್ರಗಳಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.ತಲೈವಿ ಜಯಲಲೀತಾ ಪಾತ್ರದಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಕಂಗನಾಇನ್ನೂ ಬಿಡುಗಡೆಯಾಗಬೇಕಿರುವ ಮಲಿಯಾಳಂ ಚಿತ್ರ ಮರಕ್ಕರ್: ಅರಬಿಕಡಲಿಂಟೆ ಸಿಂಹಮ್ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.