Connect with us

    FILM

    ರಾಜಕೀಯ ಎಂಟ್ರಿ ಬಗ್ಗೆ ನಟಿ ಕಂಗನಾ ರಾಣಾವತ್ ಮಾತು…!!

    ಮುಂಬೈ ಅಕ್ಟೋಬರ್ 30: ಕಂಗನಾ ರಾಣಾವತ್ ರಾಜಕೀಯ ಎಂಟ್ರಿ ಬಗ್ಗೆ ಮಾತನಾಡಿದ್ದು, ಸರ್ಕಾರ ನನ್ನ ಭಾಗವಹಿಸುವಿಕೆ ಬಯಸಿದ್ರೆ ನಾನು ರಾಜಕೀಯಕ್ಕೆ ಬರಲು ಸಿದ್ಧವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಹಿಮಾಚಲ ಪ್ರದೇಶದ ಜನರು ತಮ್ಮ ಸೇವೆ ಮಾಡಲು ನನಗೆ ಅವಕಾಶ ನೀಡಿದರೆ, ಅದು ನನ್ನ ಸೌಭಾಗ್ಯ. ನನ್ನ ಅದೃಷ್ಟ ಅಂದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.


    ನವೆಂಬರ್ 12ರಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕುರಿತು ಇತ್ತೀಚೆಗೆ ಶಿಮ್ಲಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ನಾನು ಚಲನಚಿತ್ರ ವೃತ್ತಿಜೀವನದ ಮೇಲೆ ಹೆಚ್ಚು ಕೇಂದ್ರೀಕೃತವಾಗಿದ್ದೇನೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದರು.


    ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ…. ಬಾಲಿವುಡ್ ನಟರು ಬಿಜೆಪಿ ಪಕ್ಷ ಸೇರಲು ಸ್ವಾಗತಾರ್ಹ, ಆದರೆ ಸಮಾಲೋಚನೆ ನಡೆಸಿದ ಬಳಿಕ ಚುನಾವಣೆಯಲ್ಲಿ (Elections) ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply