LATEST NEWS
ಕಂಕನಾಡಿ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ ಹೆಗ್ಡೆ ನಾಪತ್ತೆ

ಮಂಗಳೂರು ಜನವರಿ 16: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ ಹೆಗ್ಡೆ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ಮಂಜುನಾಥ್ ಅವರನ್ನು ಸಿಸಿಆರ್‌ಬಿ ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಲ್ಲಿಗೆ ಜನವರಿ 13ರಂದು ವರದಿ ಮಾಡಿಕೊಳ್ಳಬೇಕಿತ್ತು. ಜನವರಿ 13ರಂದು ಮಧ್ಯಾಹ್ನ ಮನೆಯಿಂದ ಹೊರಟ ಅವರ ಮೊಬೈಲ್ ನಂತರ ಸ್ವಿಚ್ ಆಫ್ ಆಗಿದೆ. ‘ಸದ್ಯ ಅವರು ಎಲ್ಲಿದ್ದಾರೆ ಎಂದು ತಿಳಿದಿಲ್ಲ. ಅವರ ಪತ್ತೆಗೆ ಕ್ರಮವಹಿಸಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಹಿಂದೆಯೂ ಒಮ್ಮೆ ಇದೇ ರೀತಿ ನಾಪತ್ತೆ ಯಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
