ಬೆಂಗಳೂರು ನವೆಂಬರ್ 06: ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 55 ವರ್ಷ ವಯಸ್ಸಾಗಿತ್ತು. ಅವರನ್ನು ಕ್ಯಾನ್ಸರ್ ಬಲಿ ಪಡೆದಿದೆ. ಹಲವು ವರ್ಷಗಳಿಂದ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು.


ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು. ಹರೀಶ್ ರಾಯ್ ಅವರು ಮೂಲತಹ ಉಡುಪಿಯವರು

Share Information