Connect with us

FILM

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಬೆಂಗಳೂರು, ಫೆಬ್ರವರಿ 02: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‌ ರಾವ್‌ ವಿಧಿವಶರಾಗಿದ್ದಾರೆ. ತಮ್ಮ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಮನೆ ಮಾತಾಗಿದ್ದ ಅಶೋಕ್‌ ರಾವ್‌ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದರು.

ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಕೂಡ ಚಿಕಿತ್ಸೆ ಪಡೆದ ನಂತರವೂ ಚೆನ್ನಾಗಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ಕಲಾವಿದರಾಗಿದ್ದರು. ಅಣ್ಣಾವ್ರೇ ಕರೆದು ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದರು. ಪರಶುರಾಮ ಸಿನಿಮಾ ಇವರಿಗೆ ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.

Advertisement
Click to comment

You must be logged in to post a comment Login

Leave a Reply