FILM
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
