Connect with us

FILM

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್​ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್​ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ರಾಜೇಶ್​ ಅವರಿಗೆ 82 ವರ್ಷ ವಯಸ್ಸಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್​ ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್​ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

Advertisement
Click to comment

You must be logged in to post a comment Login

Leave a Reply