Connect with us

LATEST NEWS

ಕಣ್ಣೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಇಬ್ಬರ ಬಂಧನ

ಕಾಸರಗೋಡು ಅಗಸ್ಟ್ 13: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 45 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಜೇಶ್ವರದ ಸತ್ತಾರ್ ಮತ್ತು ಸಮೀರ್ ಎಂದು ಗುರುತಿಸಲಾಗಿದೆ. ಇವರು ಶಾರ್ಜಾ ಹಾಗೂ ದುಬೈಯಿಂದ ಕಣ್ಣೂರಿಗೆ ಆಗಮಿಸಿದ್ದರು.
ಕೇರಳದಲ್ಲಿ ಅಕ್ರಮ ಚಿನ್ನ ಸಾಗಾಟದ ಪ್ರಕರಣ ಭಾರೀ ಸದ್ದು ಮಾಡಿದ ನಂತರ ಇದೀಗ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

Facebook Comments

comments