LATEST NEWS
ಕಾಂತಾರ ನಟ ರಿಷಭ್ ಶೆಟ್ಟಿಗೆ ಶತ್ರುಗಳ ಕಾಟ – ಪಂಜುರ್ಲಿ ದೈವದ ಮುಂದೆ ಕಷ್ಟ ಹೇಳಿಕೊಂಡ ರಿಷಬ್

ಮಂಗಳೂರು ಎಪ್ರಿಲ್ 07: ಕಾಂತಾರ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ನೇಮಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.
ಮಂಗಳೂರಿನ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ಭಾಗಿ ಆಗಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಹೆಂಡತಿ ಮಕ್ಕಳೊಂದಿಗೆ ಆಗಮಿಸಿದ ರಿಷಬ್ ಶೆಟ್ಟಿ ರಾತ್ರಿಯಿಂದ ಬೆಳಿಗ್ಗೆಯವರೆಗೂ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ವಾರಾಹಿ ಪಂಜುರ್ಲಿ ದೈವದ ಬಳಿ ನಟ ಕಷ್ಟ ಹೇಳಿಕೊಂಡಿದ್ದಾರೆ. ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ‘ನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ಈಗ ಹೇಳಲ್ಲ, ನೋಡಿಕೊಳ್ತೇನೆ. ‘ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ’ಎಂದು ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ.