Connect with us

    LATEST NEWS

    ಕಾಂತಾರ ಸಿನೆಮಾ ವಿರುದ್ದ ಆಕ್ರೋಶ – ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕೀಳಾಗಿ ಬಿಂಬಿಸಲಾಗಿದೆ

    ಮಂಗಳೂರು ನವೆಂಬರ್ 11: ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದು ಎಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಆಕ್ಷೇಪ ವ್ಯಕ್ತಪಡಿಸಿದರು.


    ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ ಈ ಹಿನ್ನಲೆ ಈ ಸಿನಿಮಾದಲ್ಲಿರುವ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು. ಅಲ್ಲಿಯವರೆಗೆ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.


    ದೈವಾರಾಧನೆಯಲ್ಲಿ ಮಾನವ ವಿರೋಧಿ ಹಿಂಸೆಗೆ ಅವಕಾಶ ಇಲ್ಲ. ಈ ಚಿತ್ರದ ಕೆಲವು ದೃಶ್ಯಗಳಿಂದ ದೈವನಿಂದನೆ ಆಗಿದೆ. ಆದರೂ ಈ ಸಿನಿಮಾ‌ಕ್ಕೆ ಚಲನಚಿತ್ರ ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣಪತ್ರವನ್ನು ನೀಡಿದೆ. ಈ ಕ್ರಮ ಸರಿಯಲ್ಲ’ ಎಂದರು. ‘ಅಸ್ಪೃಶ್ಯತಾ ಆಚರಣೆ ಮತ್ತು ಪರಿಶಿಷ್ಟ ಸಮುದಾಯಗಳ ಅವಮಾನ, ದೌರ್ಜನ್ಯಗಳು ಶಿಕ್ಷಾರ್ಹ ಅಪರಾಧ. ಕಾಂತಾರ ಸಿನಿಮಾದಲ್ಲಿ ಇಂತಹ ಕೆಲವು ದೃಶ್ಯಗಳು ಕಂಡು ದೈವ ನರ್ತಕ ಸಮುದಾಯದವರನ್ನು ನೋಡಿ ನಗುವಂತಾಗಿದೆ. ಇಂತಹ ದೃಶ್ಯಗಳಿಗೆ ಕತ್ತರಿ ಹಾಕುವವರೆಗೆ ಈ ಚಿತ್ರದ ಪ್ರದರ್ಶನವನ್ನು ತಡೆಯಲು ಜಿಲ್ಲಾ ದಂಡಾಧಿಕಾರಿಯವರು ಕ್ರಮಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *